ಈ ಗೆಲುವು ಮೋದಿ ಗೆಲುವು; ಮಣಿಪುರ, ಗೋವಾದಲ್ಲೂ ಸರ್ಕಾರ ರಚನೆ ವಿಶ್ವಾಸ: ಅಮಿತ್ ಶಾ
ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ....

Published On :
ನವದೆಹಲಿ: ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಹೇಳಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಈ ಚುನಾವಣೆಯಲ್ಲಿ ಮತದಾರರು ಪ್ರತಿಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಸ್ವಾತಂತ್ರ್ಯ ನಂತರ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.
ನೋಟ್ ನಿಷೇಧ, ಉಜ್ವಲ್ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ಬಡವರಿಗಾಗಿ ಜಾರಿಗೆ ತಂದ ಹಲವು ಯೋಜನೆಗಳಿಂದ ಬಿಜೆಪಿ ಗೆಲುವು ಸಾಧಿಸಿದೆ. ಜಾತಿವಾದ ಹಾಗೂ ಕುಟುಂಬ ರಾಜಕಾರಣಕ್ಕೆ ಜನ ವಿರೋಧ ವ್ಯಕ್ತಪಡಿಸಿದ್ದು, ಕೇವಲ ಅಭಿವೃದ್ಧಿಗೆ ಮಾತ್ರ ಮತ ನೀಡಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರು ತಿಳಿಸಿದ್ದಾರೆ.
ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದು, ಗೋವಾ ಹಾಗೂ ಮಣಿಪುರದಲ್ಲಿ ಇತರರ ಸಹಕಾರದೊಂದಿಗೆ ಸರ್ಕಾರ ರಚಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ.
ಇನ್ನು ಬಿಜೆಪಿ ಗೆಲುವಿಗೆ ಇವಿಎಂ ಮಷಿನ್ ದೋಷವೇ ಕಾರಣ ಎಂದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಅದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಆ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಪಕ್ಷದ ಗೆಲುವಿಗೆ ಕಾರಣರಾದ ಮತಾದರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಮಿತ್ ಶಾ ಧನ್ಯವಾದ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


