ಪ್ರಧಾನ ಸುದ್ದಿ

ಪ್ರಧಾನಿ ಮೋದಿ ವಿಶ್ವ ನಾಯಕ, ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಾರೆ: ಲೋಕಸಭೆಯಲ್ಲಿ ಯೋಗಿ ಆದಿತ್ಯನಾಥ್

ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಶ್ವ ನಾಯಕರಾಗಿದ್ದು, ಯಾವುದೇ ಪಕ್ಷಪಾತ ಮಾಡದೆ ಸರ್ವರ ಅಭಿವೃದ್ಧಿಗಾಗಿ ಕೆಲಸ....

ಪ್ರಧಾನಿ ಮೋದಿ ವಿಶ್ವ ನಾಯಕ, ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಾರೆ: ಲೋಕಸಭೆಯಲ್ಲಿ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ವಿಶ್ವ ನಾಯಕರಾಗಿದ್ದು, ಯಾವುದೇ ಪಕ್ಷಪಾತ ಮಾಡದೆ ಸರ್ವರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಲೋಕಸಭೆಯಲ್ಲಿ ಹಾಡಿ ಹೊಗಳಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಇಂದು ಲೋಕಸಭೆಯಲ್ಲಿ ತಮ್ಮ ವಿದಾಯ ಭಾಷಣ ಮಾಡಿದ ಯೋಗಿ ಆದಿತ್ಯನಾಥ್ ಅವರು, ಮೋದಿ ಸರ್ಕಾರ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ನಮ್ಮ ಪ್ರಧಾನಿ ಜಾಗತಿಕ ಅಭಿವೃದ್ಧಿಯ ಸಂಕೇತವಾಗಿದ್ದು, ನಾನು ನನ್ನ ಪಕ್ಷ ಮತ್ತು ಪ್ರಧಾನಿ ಮೋದಿಗೆ ಅಬಾರಿಯಾಗಿದ್ದೇನೆ ಎಂದರು.
ಉಜ್ವಲ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಯಾವುದೇ ತಾರತಮ್ಮವಿಲ್ಲದೆ ಸಮಾಜದ ಎಲ್ಲಾ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಯೋಗಿ ಹೇಳಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶದ ಈ ಹಿಂದಿನ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್ ಅವರು, ಕಳೆದ ಎರಡೂವರೆ ವರ್ಷಗಳಲ್ಲಿ ಕೇಂದ್ರ ಸರ್ಕಾರ ಉತ್ತರ ಪ್ರದೇಶ 2.5 ಲಕ್ಷ ಕೋಟಿ ಅನುದಾನಿ ನೀಡಿದೆ. ಆದರೆ ಅವರು ಅದನ್ನು ಸರಿಯಾಗ ಬಳಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ತಾವು ಉತ್ತರ ಪ್ರದೇಶವನ್ನು ಗೂಂಡಾಗಿರಿ ಮುಕ್ತ, ಭ್ರಷ್ಟಾಚಾರ ಮುಕ್ತಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ರಾಜ್ಯ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಜನ ನನ್ನ ವಯಸ್ಸಿನ ಬಗ್ಗೆ ಮಾತನಾಡಬಹುದು. ಆದರೆ ನಾನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗಿಂತ ಒಂದು ವರ್ಷ ಚಿಕ್ಕವನು ಮತ್ತು ಅಖಿಲೇಶ್ ಯಾದವ್ ಅವರಿಗಿಂತ ಒಂದು ವರ್ಷ ದೊಡ್ಡವನು. ನಾನು ಅವರಿಬ್ಬರ ಮಧ್ಯೆ ಇದ್ದೇನೆ ಎಂದು ತಮ್ಮ ವಿರೋಧಿಗಳಿಗೆ ಉತ್ತರ ಪ್ರದೇಶ ಸಿಎಂ ಟಾಂಗ್ ನೀಡಿದ್ದಾರೆ. 
ಬಿಜೆಪಿ ಹಿಂದೂತ್ವವಾದಿ ನಾಯಕ ಹಾಗೂ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್ ಅವರು ಕಳೆದ ಭಾನುವಾರ ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.