ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲೂ ಯೋಗಿ ಅವತರಿಸಲಿದ್ದಾರೆ: ಬಿಜೆಪಿ ಮುಖಂಡ
ಉದ್ಯೋಗಗಳಲ್ಲಿ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲಿಯೂ ಯೋಗಿ ಅವತರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಎಚ್ಚರಿಸಿದ್ದಾರೆ.

Published On :
ಹೈದರಾಬಾದ್: ಉದ್ಯೋಗಗಳಲ್ಲಿ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದರೆ ತೆಲಂಗಾಣದಲ್ಲಿಯೂ ಯೋಗಿ ಅವತರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಎಚ್ಚರಿಸಿದ್ದಾರೆ.
ಈ ಮೂಲಕ ಮುಸ್ಲಿಮರ ಮೀಸಲಾತಿಯನ್ನು ೪% ನಿಂದ ೧೨% ಹೆಚ್ಚಿಸುವ ತೆಲಂಗಾಣ ರಾಷ್ಟ್ರೀಯ ಸಮಿತಿ ಸರ್ಕಾರದ ಪ್ರಸ್ತಾವನೆಯ ವಿರುದ್ಧ ತೆಲಂಗಾಣ ವಿಧಾನಸಭಾ ಸದಸ್ಯ ಎನ್ ವಿ ಎಸ್ ಎಸ್ ಪ್ರಭಾಕರ್ ಎಚ್ಚರಿಸಿದ್ದಾರೆ.
"ಮುಸ್ಲಿಮರಿಗೆ ಮೀಸಲಾತಿ ನೀಡಿದರೆ, ಮತ್ತೊಬ್ಬ ಯೋಗಿ ತೆಲಂಗಾಣದಲ್ಲಿ ಅವತರಿಸಲಿದ್ದಾರೆ" ಎಂದು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿದ ಬಿಜೆಪಿ ತೀವ್ರವಾದಿ ಮುಖಂಡ ಯೋಗಿ ಆದಿತ್ಯನಾಥ್ ಅವರಿಗೆ ಸಂಬಂಧಿಸಿ ಹೇಳಿದ್ದಾರೆ.
ತೆಲಂಗಾಣ ಹಿಂದುಳಿದ ವರ್ಗಗಳ ಆಯೋಗ ಅಲ್ಪಸಂಖ್ಯಾತರೊಂದಿಗೆ ಕೆಲಸ ಮಾಡುತ್ತಾ ಹಿಂದುಳಿದ ವರ್ಗಕ್ಕೆ ಅನ್ಯಾಯವೆಸಗುತ್ತಿದೆ ಎಂದು ಕೂಡ ಪ್ರಭಾಕರ್ ದೂರಿದ್ದಾರೆ. ಬಿಸಿ ಆಯೋಗ ಮುಸ್ಲಿಮರ ಸಾಮಾಜಿಕ ಪರಿಸ್ಥಿಯನ್ನು ಕುರಿತು ಮಾಡಿರುವ ಅಧ್ಯಯನವನ್ನು ಉದಾಹರಿಸಿ ಅವರು ದೂರಿದ್ದಾರೆ.
ಈ ಅನುಪಾತದಲ್ಲಿ ಮುಸ್ಲಿಮರಿಗೆ ಮೀಸಲಾತಿ ಸೃಷ್ಟಿಸಿದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವುದಾಗಿಯೂ ಬಿಜೆಪಿ ಎಚ್ಚರಿಸಿದೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಕಲ್ಪಿಸುವುದು ಸಂವಿಧಾನಕ್ಕೆ ವಿರುದ್ಧ ಎಂದಿರುವ ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಲಕ್ಷ್ಮಣ್, ಈ ಹಿಂದೆ ಮುಸ್ಲಿಮರಿಗೆ ಮೀಸಲಾತಿ ನೀಡುವುದರಿಂದ ಕೋರ್ಟ್ ತಡೆದಿತ್ತು ಎಂದು ಕೂಡ ಹೇಳಿದ್ದಾರೆ.
ಈಗ ಜಾರಿಯಲ್ಲಿರುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಸರ್ಕಾರ ಮುಸ್ಲಿಮರು ಮತ್ತು ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ಹೆಚ್ಚಿಸುವ ಮಸೂದೆಯನ್ನು ಮಂಡಿಸಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


