ಪ್ರಧಾನ ಸುದ್ದಿ

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ, ಪ್ರಧಾನಿ ಮೋದಿ ಹೊಗಳಿದ ಮಾಜಿ ಸಿಎಂ

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬುಧವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ...

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ, ಪ್ರಧಾನಿ ಮೋದಿ ಹೊಗಳಿದ ಮಾಜಿ ಸಿಎಂ
ಎಸ್ ಎಂ ಕೃಷ್ಣ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತಿರುವ ಅಮಿತ್ ಶಾ
Published On :
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬುಧವಾರ ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಮಿತ್ ಶಾ ಅವರು ಎಸ್.ಎಂ.ಕೃಷ್ಣ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಉಪಸ್ಥಿತರಿದ್ದರು.
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಕೃಷ್ಣ, ರಾಜಕೀಯದಲ್ಲಿ ಬಹು ದೊಡ್ಡ ಪ್ರಯಾಣ ಮಾಡಿದ್ದೇನೆ. ನನ್ನ ಪ್ರಯಾಣ ಈಗ ಅತ್ಯಂತ ಪ್ರಮುಖ ನಿಲ್ದಾಣಕ್ಕೆ ಬಂದು ನಿಂತಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಭಾರತ ಅಭಿವೃದ್ಧಿ ಕಾಣುತ್ತಿದೆ ಎಂದು ಮಾಜಿ ಹಿರಿಯ ಕಾಂಗ್ರೆಸ್ ನಾಯಕ ಹೊಗಳಿದ್ದಾರೆ.
ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದ 84 ವರ್ಷದ ಎಸ್ ಎಂ ಕೃಷ್ಣ ಅವರು ಕರ್ನಾಟಕ ಮುಖ್ಯಮಂತ್ರಿ, ಮಹಾರಾಷ್ಟ್ರ ರಾಜ್ಯಪಾಲ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚಿಗೆ ಪಕ್ಷದಲ್ಲಿ ತಮ್ಮ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಕಳೆದ ಜನವರಿಯಲ್ಲಿ ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ್ದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಸೇರುವಂತೆ ಕೃಷ್ಣ ಅವರಿಗೆ ಆಹ್ವಾನ ನೀಡಿದ್ದರು. ಯಡಿಯೂರಪ್ಪ ಆಹ್ವಾನ ಸ್ವೀಕರಿಸಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.