ಪ್ರಧಾನ ಸುದ್ದಿ

ಕೆಎಂಎಫ್ ನೂತನ ಅಧ್ಯಕ್ಷರಾಗಿ ಶಾಸಕ ಎಂ.ಪಿ.ರವೀಂದ್ರ ನೇಮಕ

ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನೂತನ ಅಧ್ಯಕ್ಷರಾಗಿ ಹರಪನಹಳ್ಳಿ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅವರನ್ನು....

ಕೆಎಂಎಫ್ ನೂತನ ಅಧ್ಯಕ್ಷರಾಗಿ ಶಾಸಕ ಎಂ.ಪಿ.ರವೀಂದ್ರ ನೇಮಕ
ಎಂ ಪಿ ರವೀಂದ್ರ
Published On :
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನೂತನ ಅಧ್ಯಕ್ಷರಾಗಿ ಹರಪನಹಳ್ಳಿ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆದೇಶ ಹೊರಡಿಸಿದ್ದು, ಅಧ್ಯಕ್ಷ ಗಾದಿಗಾಗಿ ಹಲವು ದಿನಗಳಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ.
ಹಾಲಿ ಅಧ್ಯಕ್ಷ ನಾಗರಾಜ್ ಅವರಿಂದ ರಾಜಿನಾಮೆ ಪಡೆದು ಅವರ ಸ್ಥಾನಕ್ಕೆ ಎಂ.ಪಿ.ರವೀಂದ್ರ ಅವರನ್ನು ಸಿಎಂ ನೇಮಕ ಮಾಡಿದ್ದು, ನಾಳೆ ಕೆಎಂಫ್ ಅಧ್ಯಕ್ಷರಾಗಿ ರವೀಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮೊದಲ ಎರಡು ವರ್ಷದ ಅವಧಿಗೆ ನಾಗರಾಜ್, ನಂತರದ ಮೂರು ವರ್ಷದ ಅವಧಿಗೆ ಎಂ.ಪಿ.ರವೀಂದ್ರ ಅಧ್ಯಕ್ಷರಾಗಬೇಕೆಂಬ ಒಪ್ಪಂದದ ಮೇಲೆ ಮೊದಲ ಅವಧಿಗೆ ನಾಗರಾಜ್ ಅಧ್ಯಕ್ಷರಾಗಿದ್ದರು. ಆದರೆ, ನಂತರ ಒಂದೊಂದೇ ತಕರಾರು ಮಾಡುತ್ತಾ ಬಂದಿದ್ದ ನಾಗರಾಜ್ ಅವರು, ಹಲವು ದಿನಗಳಿಂದ ಸ್ವತಃ  ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜಿನಾಮೆ ನೀಡುವಂತೆ ಸೂಚಿಸಿದರು ರಾಜಿನಾಮೆ ನೀಡಿರಲಿಲ್ಲ.
2016ರ ಸೆಪ್ಟೆಂಬರ್ ನಲ್ಲಿಯೇ ನಾಗರಾಜ್ ಅವರು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಬೇಕಿದ್ದರೂ ಇದುವರೆಗೂ ರಾಜಿನಾಮೆ ನೀಡಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.