ಪ್ರಧಾನ ಸುದ್ದಿ

ಜೇಟ್ಲಿ ಮಾನಹಾನಿ ಪ್ರಕರಣ: ವಿಚಾರಣೆ ಎದುರಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುವಂತೆ....

ಜೇಟ್ಲಿ ಮಾನಹಾನಿ ಪ್ರಕರಣ: ವಿಚಾರಣೆ ಎದುರಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆ
ಅರವಿಂದ್ ಕೇಜ್ರಿವಾಲ್
Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಐವರು ಎಎಪಿ ನಾಯಕರಿಗೆ ದೆಹಲಿ ಕೋರ್ಟ್ ಶನಿವಾರ ಸೂಚಿಸಿದೆ.
ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಅವ್ಯವಹಾರ ನಡೆದಿದೆ(ಡಿಡಿಸಿಎ) ಎಂದು ಆರೋಪಿಸಿದ್ದ ಕೇಜ್ರಿವಾಲ್ ಹಾಗೂ ಇತರೆ ಐವರು ಆಪ್ ಮುಖಂಡರ ವಿರುದ್ಧ ಅರುಣ್ ಜೇಟ್ಲಿ ದಾಖಲಿಸಿದ್ದ 10 ಕೋಟಿ ರುಪಾಯಿ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಇಂದು ಮೆಟ್ರೋಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಸುಮಿತ್ ದಾಸ್ ಅವರು ಕೈಗೆತ್ತಿಕೊಂಡಿದ್ದು, ವಿಚಾರಣೆಗೆ ಜೇಟ್ಲಿ ಗೈರು ಹಾಜರಾಗಿದ್ದಕ್ಕೆ ಬಿಸಿ, ಬಿಸಿ ವಾದ, ಪ್ರತಿವಾದ ನಡೆಯಿತು.
ಪ್ರಕರಣದ ಆರೋಪಿತ ಅರವಿಂದ್ ಕೇಜ್ರಿವಾಲ್ ಕೋರ್ಟ್ ಹಾಲ್ ನೊಳಗೆ ಹಾಜರಿದ್ದರು. ಈ ಸಂದರ್ಭದಲ್ಲಿ ನ್ಯಾಯಾಧೀಶರು, ಪ್ರಕರಣಕ್ಕೆ ಸಂಬಂಧಪಡದವರು, ಹಾಲ್ ನಿಂದ ಹೊರಹೋಗುವಂತೆ ಸೂಚಿಸಿದರು.
ಮಾನನಷ್ಟ ಮೊಕದ್ದಮೆ ವಿಚಾರಣೆಯಲ್ಲಿ ಕೇಜ್ರಿವಾಲ್ ಸ್ವತಃ ವಾದಿಸಿದ್ದರು. ವಾದ, ಪ್ರತಿವಾದ ಆಲಿಸಿದ ಬಳಿಕ ಚೀಫ್ ಮೆಟ್ರೊಪೊಲಿಟಿಯನ್ ಮ್ಯಾಜಿಸ್ಟ್ರೇಟ್ ಅವರು, ಕೇಜ್ರಿವಾಲ್ ಹಾಗೂ ಇತರ ಆಪ್ ಮುಖಂಡರಿಗೆ ವಿಚಾರಣೆ ಎದುರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿದ್ದಾರೆ.
ವಿಚಾರಣೆಯಲ್ಲಿ ಕೇಜ್ರಿವಾಲ್ ಹಾಗೂ ಆಪ್ ಮುಖಂಡರಾದ ಅಶುತೋಷ್, ಕುಮಾರ್ ಬಿಸ್ವಾಸ್, ಸಂಜಯ್ ಸಿಂಗ್, ರಾಘವ್ ಚಡ್ಡಾ ಮತ್ತು ದೀಪಕ್ ಬಾಜ್ ಪಾಯ್ ಅವರು ತಾವು ದೋಷಿತರಲ್ಲ, ವಿಚಾರಣೆ ಎದುರಿಸಲು ಸಿದ್ಧ ಎಂದು ಹೇಳಿದ್ದರು.
ಅರುಣ್ ಜೇಟ್ಲಿ ಅವರು 13 ವರ್ಷಗಳ ಕಾಲ ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ ವೇಳೆ ಭಾರೀ ಅವ್ಯವಹಾರ ನಡೆದಿರುವುದಾಗಿ ಕೇಜ್ರಿವಾಲ್ ಹಾಗೂ ಆಪ್ ಮುಖಂಡರು ಆರೋಪಿಸಿದ್ದರು. ಆದರೆ ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಹೇಳಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ ಅವರು 2015ರಲ್ಲಿ ಕೇಜ್ರಿವಾಲ್ ಹಾಗೂ ಆಪ್ ಮುಖಂಡರ ವಿರುದ್ಧ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.