ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ ಮಾರಾಟ ಮಾಡುತ್ತಿಲ್ಲ ಎಂಬುದು ಖಚಿತಪಡಿಸಿ: ಸಿಬಿಎಸ್ಇಗೆ ಕೋರ್ಟ್
ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳು ಶಾಲಾ ಆವರಣದಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳ ಮಾರಾಟ ಮಾಡುವಂತಿಲ್ಲ....

Published On :
ನವದೆಹಲಿ: ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳು ಶಾಲಾ ಆವರಣದಲ್ಲಿ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳ ಮಾರಾಟ ಮಾಡುವಂತಿಲ್ಲ ಎಂಬುದನ್ನು ಖಚಿತಪಡಿಸುವಂತೆ ದೆಹಲಿ ಕೋರ್ಟ್ ಮಂಗಳವಾರ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) ಸೂಚಿಸಿದೆ.
ಶಾಲಾ ಆವರಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸದಂತೆ ಸಿಬಿಎಸ್ ಇಗೆ ಸೂಚಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸುನಿಲ್ ಪೊಕ್ರಿಯಾಲ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕಾರ್ಯಕಾರಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಹಾಗೂ ನ್ಯಾಮೂರ್ತಿ ಅನು ಮಲ್ಹೊತ್ರಾ ಅವರು, ಶಾಲೆಗಳಲ್ಲಿ ಪುಸ್ತಕ, ಸಮವಸ್ತ್ರ ಮಾರಾಟ ಮಾಡುತ್ತಿಲ್ಲ ಎಂಬುದನ್ನು ಕೋರ್ಟ್ ಗೆ ಖಚಿತಪಡಿಸುವಂತೆ ಸೂಚಿಸಿದ್ದಾರೆ.
ಸಿಬಿಎಸ್ ಇ ಈ ಸಂಬಂಧ ಇತ್ತೀಚಿಗಷ್ಟೇ ಅಧಿಸೂಚನೆಯೊಂದನ್ನು ಹೊರಡಿಸಿ, ಶಿಕ್ಷಣ ಸಂಸ್ಥೆಗಳು ವ್ಯಾಪಾರಿ ಕೇಂದ್ರಗಳಲ್ಲ, ಅಲ್ಲಿ ಪುಸ್ತಕ, ಸಮವಸ್ತ್ರ ಹಾಗೂ ಇತರೆ ಲೇಖನ ಸಾಮಾಗ್ರಿಗಳ ಮಾರಾಟ ಮಾಡುವುದು ಕಾನೂನು ಬಾಹಿರವಾಗುತ್ತದೆ ಎಂದು ಕಠಿಣ ಎಚ್ಚರಿಕೆ ನೀಡಿತ್ತು.
ಕೆಲವು ಶಾಲೆಗಳು ಶಾಲಾ ಆವರಣದಲ್ಲಿಯೇ ನಿರ್ದಿಷ್ಟ ಮಾರಾಟಗಾರರಿಂದ ಪುಸ್ತಕ ಹಾಗೂ ಸಮವಸ್ತ್ರ ಮಾರಾಟದಂತಹ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಈ ಎಚ್ಚರಿಕೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


