ಪ್ರಧಾನ ಸುದ್ದಿ

ಪಿಎಸಿ ಅಧ್ಯಕ್ಷರಾಗಿ ಮಲಿಕಾರ್ಜುನ್ ಖರ್ಗೆ ಅಧಿಕಾರ

ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು 21 ಸದಸ್ಯ ಬಲದ ಸಂಸತ್‌ ಸಾರ್ವಜನಿಕ ಲೆಕ್ಕಪತ್ರ ಸಮಿತಿ....

ಪಿಎಸಿ ಅಧ್ಯಕ್ಷರಾಗಿ ಮಲಿಕಾರ್ಜುನ್ ಖರ್ಗೆ ಅಧಿಕಾರ
ಮಲ್ಲಿಕಾರ್ಜುನ್ ಖರ್ಗೆ
Published On :
ನವದೆಹಲಿ: ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು 21 ಸದಸ್ಯ ಬಲದ ಸಂಸತ್‌ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ಸಂಜೆ ಸಂಸತ್ ಭವನದಲ್ಲಿ ಪಿಎಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಅವರು ಅಧಿಕಾರ ಸ್ವೀಕರಿಸಿದರು.
ಪಿಎಸಿ ಅಧ್ಯಕ್ಷರಾಗಿದ್ದ ಕೆ.ವಿ.ಥಾಮಸ್‌ ಅವಧಿ ಎಪ್ರಿಲ್‌ 30ರಂದು ಅಂತ್ಯಗೊಂಡಿದ್ದು, ಅವರ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ. 
ಆಡಳಿತರೂಢ ಎನ್‌ಡಿಎ ಅತಿ ಹೆಚ್ಚು ಸದಸ್ಯ ಬಲ ಹೊಂದಿರುವ ಈ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಪ್ರತಿಪಕ್ಷದ ನಾಯಕರೊಬ್ಬರನ್ನು ಆಯ್ಕೆ ಮಾಡಬೇಕಾಗುತ್ತದೆ. 
ಇಬ್ಬರು ಹೊಸ ಮುಖಗಳನ್ನು ಹೊರತುಪಡಿಸಿ ಉಳಿದಂತೆ ಈ ಹಿಂದಿನ ಸದಸ್ಯರನ್ನೇ ಪಿಎಸಿಗೆ ನೇಮಕ ಮಾಡಲಾಗಿದೆ. ಬಿಜೆಪಿಯ ಸುಭಾಷ್‌ ಚಂದ್ರ ಬಹೇರಿಯ ಹಾಗೂ ರಾಮ್‌ ಶಂಕರ್‌ ಅವರ ಬದಲಾಗಿ ರಿಚರ್ಡ್‌ ಹೇ ಮತ್ತು ಜನಾರ್ದನ ಸಿಂಗ್‌ ಸಿಗ್ರಿವಾಲ್‌ ಅವರನ್ನು ನೇಮಕ ಮಾಡಲಾಗಿದೆ.
1950, ಜನವರಿ 26ರಂದು ಅಸ್ತಿತ್ವಕ್ಕೆ ಬಂದ ಸಂಸತ್‌ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇದುವರೆಗೆ 1,571 ವರದಿಗಳನ್ನು ನೀಡಿದೆ. 1967ರಲ್ಲಿ ಈ ಸಮಿತಿಗೆ ವಿಪಕ್ಷದ ಯಾವುದಾದರೊಬ್ಬ ನಾಯಕರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.