ಪ್ರಧಾನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಬಿಜೆಪಿಗೆ ಟಿಆರ್ ಎಸ್ ಬೆಂಬಲ ಘೋಷಣೆ

ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಮುಖ್ಯಸ್ಥ ಹಾಗೂ ತೆಲಂಗಾಣ....

ರಾಷ್ಟ್ರಪತಿ ಚುನಾವಣೆ: ಬಿಜೆಪಿಗೆ ಟಿಆರ್ ಎಸ್ ಬೆಂಬಲ ಘೋಷಣೆ
ಟಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ - ಪ್ರಧಾನಿ ನರೇಂದ್ರ ಮೋದಿ
Published On :
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ಗುರುವಾರ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿ ನೆರವಾದರೆ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಟಿಆರ್ ಎಸ್ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲಿದೆ ಎಂದು ಟಿಆರ್ ಎಸ್ ಸಂಸದ ಜೀತೇಂದ್ರ ರೆಡ್ಡಿ ಅವರು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರ ಅವಧಿ ಇದೇ ಜುಲೈ ಅಂತ್ಯವಾಗುತ್ತಿದ್ದು, ನೂತನ ರಾಷ್ಟ್ರಪತಿ ಆಯ್ಕೆಗೆ ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ತಾಲೀಮು ನಡೆಸುತ್ತಿವೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.