ಪ್ರಧಾನ ಸುದ್ದಿ

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಅಥವಾ ಜೈಲು?: ಇಂದು ಸುಪ್ರೀಂ ತೀರ್ಪು

ನಾಲ್ಕು ವರ್ಷಗಳ ಹಿಂದೆ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನೀಡಲಿದೆ.

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಅಥವಾ ಜೈಲು?: ಇಂದು ಸುಪ್ರೀಂ ತೀರ್ಪು
ಸಂಗ್ರಹ ಚಿತ್ರ
Published On :

ನವದೆಹಲಿ: ನಾಲ್ಕು ವರ್ಷಗಳ ಹಿಂದೆ ಇಡೀ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದ್ದ ನಿರ್ಭಯಾ ಹತ್ಯಾಚಾರ ಪ್ರಕರಣದ ಅಂತಿಮ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ನೀಡಲಿದೆ.

ದೆಹಲಿಯಲ್ಲಿ ನಾಲ್ಕು ವರ್ಷದ ಹಿಂದೆ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಯೇ ಅಥವಾ ಜೀವಾವಧಿ ಶಿಕ್ಷೆಯೇ ಎಂಬುದನ್ನು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದ್ದು, ದೆಹಲಿಯ  ವಿಚಾರಣಾಧೀನ ನ್ಯಾಯಾಲಯ 2013ರಲ್ಲಿ ಗಲ್ಲುಶಿಕ್ಷೆ ನೀಡುವಂತೆ ಆದೇಶ ನೀಡಿತ್ತು. ಅದರ ಮರು ವರ್ಷ ದೆಹಲಿ ಹೈಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ,  ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೀಗ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತನ್ನ ಅಂತಿಮ ತೀರ್ಪನ್ನು ಇಂದು ಪ್ರಕಟಿಸಲಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ಪೀಠ ತನ್ನ ಅಂತಿಮ ತೀರ್ಪು ನೀಡಲಿದೆ,

ಇನ್ನು ಡಿಸೆಂಬರ್ 16, 2012ರಂದು ನಡೆದಿದ್ದ ಅತ್ಯಾಚಾರದಲ್ಲಿ ಪ್ರಮುಖ ಆರೋಪಿಯಾಗಿದ್ದ ರಾಮ್ ಸಿಂಗ್ 2013ರಲ್ಲಿ ತಿಹಾರ್ ಜೈಲಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಕಳೆದ ಆಗಸ್ಟ್ ನಲ್ಲಿ ವಿನಯ್ ಶರ್ಮಾ  ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಇನ್ನೊಬ್ಬ ಮೂರು ವರ್ಷಗಳ ಕಾಲ ಬಾಲಮಂದಿರದಲ್ಲಿ ಕಳೆದ ನಂತರ ಡಿಸೆಂಬರ್ 2015ರಲ್ಲಿ ಬಿಡುಗಡೆಯಾಗಿದ್ದಾನೆ. ಬಾಲಾಪರಾಧಿ ಕಾಯ್ದೆ ಅಡಿ ಆತ  ಬಿಡುಗಡೆಯಾಗಿದ್ದ. ಸದ್ಯ ಕಾನೂನಿಗೆ ತಿದ್ದುಪಡಿ ತಂದಿದ್ದು, ಹದಿನಾರರಿಂದ ಹದಿನೆಂಟು ವರ್ಷದ ಮಧ್ಯೆ ಇರುವವರು ಕ್ರೂರ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ ಅವರನ್ನು ವಯಸ್ಕರು ಎಂದೇ ಪರಿಗಣಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.