ಪ್ರಧಾನ ಸುದ್ದಿ

ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಿದ ಗೃಹ ಕಾರ್ಯದರ್ಶಿ

ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹರಿಶಿ ಗುರುವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಿ ಶಾಂತಿ ಕದಡಿರುವ ಕಣಿವೆ ರಾಜ್ಯದ ಪರಿಸ್ಥಿತಿಯನ್ನು

ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಿದ ಗೃಹ ಕಾರ್ಯದರ್ಶಿ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ
Published On :
ಶ್ರೀನಗರ: ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹರಿಶಿ ಗುರುವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಿ ಶಾಂತಿ ಕದಡಿರುವ ಕಣಿವೆ ರಾಜ್ಯದ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
"ಗೃಹ ಕಾರ್ಯದರ್ಶಿ ರಾಜ್ಯಪಾಲ ಎನ್ ಎನ್ ವೋಹ್ರಾ ಅವರನ್ನು ಕೂಡ ಇಂದು ರಾಜಭವನದಲ್ಲಿ ಭೇಟಿ ಮಾಡಲಿದ್ದಾರೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕಳೆದ ತಿಂಗಳು ಮುಫ್ತಿ ನವದೆಹಲಿಯಲ್ಲಿ ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ ನಂತರ ಕಣಿವೆ ರಾಜ್ಯಕ್ಕೆ ರಾಜೀವ್ ಮೆಹರಿಶಿ ಅವರ ಮೊದಲ ಭೇಟಿ ಇದಾಗಿದೆ. 
ಲೋಕಸಭಾ ಚುನಾವಣಾ ನಂತರ ಏಪ್ರಿಲ್ ನಲ್ಲಿ ನಡೆದ ನಾಗರಿಕರ ಹತ್ಯೆಯ ನಂತರ ಕಣಿವೆ ಅಶಾಂತಿಯಿಂದ ಕುದಿಯುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.