"ದಿ ಗೇಮ್ ಚೇಂಜರ್" ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಜೂನ್ ನಲ್ಲಿ ಉಡಾವಣೆ!
ಭಾರತದ ಅತ್ಯಂತ ಶಕ್ತಿಶಾಲಿ ಉಡಾವಣಾ ವಾಹಕ ಎಂದೇ ಖ್ಯಾತಿಗಳಿಸಿರುವ "ದಿ ಗೇಮ್ ಚೇಂಜರ್" ಜಿಎಲ್ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಜೂನ್ ಮೊದಲ ವಾರದಲ್ಲಿ ಉಡಾಯಿಸಲಾಗುತ್ತದೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತದ ಅತ್ಯಂತ ಶಕ್ತಿಶಾಲಿ ಉಡಾವಣಾ ವಾಹಕ ಎಂದೇ ಖ್ಯಾತಿಗಳಿಸಿರುವ "ದಿ ಗೇಮ್ ಚೇಂಜರ್" ಜಿಎಸ್ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಜೂನ್ ಮೊದಲ ವಾರದಲ್ಲಿ ಉಡಾಯಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಯೋಜನೆಗಳಲ್ಲೇ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಜಿಎಸ್ಎಲ್ ವಿ ಮಾರ್ಕ್ 3 ರಾಕೆಟ್ ಉಡಾವಣೆಯನ್ನು ಮುಂಬರುವ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ ಎಂದು ಇಸ್ರೋ ತಿಳಿಸಿದೆ. ಭಾರತದಲ್ಲಿರುವ ಉಡಾವಣಾ ವಾಹಕಗಳಲ್ಲೇ ಅತ್ಯಂತ ಶಕ್ತಿಶಾಲಿ ರಾಕೆಟ್ ಎಂದು ಖ್ಯಾತಿಗಳಿಸಿರುವ ಜಿಎಸ್ಎಲ್ ವಿ ಮಾರ್ಕ್ 3 ರಾಕೆಟ್ ಉಡಾವಣೆಗೆ ಇಸ್ರೋ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಬಹು ಉದ್ದೇಶಿತ ಜಿಎಸ್ಎಲ್ ವಿ ಮಾರ್ಕ್ 3 ರಾಕೆಟ್ ಅನ್ನು ಜೂನ್ ಮೊದಲ ವಾರದಲ್ಲಿ ಉಡಾಯಿಸಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಿರಣ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ರಾಕೆಟ್ ಗೆ ತಾಂತ್ರಿಕ ಸಲಕರಣೆಗಳ ಜೋಡಣೆಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲೇ ಈ ಕಾರ್ಯ ಪೂರ್ಣಗೊಂಡು ರಾಕೆಟ್ ಉಡಾವಣೆಗೆ ಸಿದ್ಧವಾಗಲಿದೆ ಎಂದು ಕಿರಣ್ ಕುಮಾರ್ ಹೇಳಿದ್ದಾರೆ.
"ದಿ ಗೇಮ್ ಚೇಂಜರ್" ಜಿಎಸ್ಎಲ್ ವಿ ಮಾರ್ಕ್ 3 ವಿಶೇಷತೆ
ಜಿಎಸ್ ಎಲ್ ವಿ ಮಾರ್ಕ್ 3 ಪ್ರಸ್ತುತ ಭಾರತದಲ್ಲಿರುವ ರಾಕೆಟ್ ಗಳಲ್ಲೇ ಅತ್ಯಂತ ಶಕ್ತಿಶಾಲಿ ನೌಕೆಯಾಗಿದ್ದು, ಬರೊಬ್ಬರಿ 4 ಟನ್ ತೂಕದ ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಸಾಮರ್ಥ್ಯಹೊಂದಿದೆ. ಇದಲ್ಲದೆ ಬಾಹ್ಯಾಕಾಶಕ್ಕೆ ಮಾನವ ಸಹಿತ ನೌಕೆ ಕಳುಹಿಸಬೇಕು ಎನ್ನುವ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಗೂ ಇದು ನೆರವಾಗಲಿದೆ. ಇದೇ ಕಾರಣಕ್ಕೆ ಈ ಹಿಂದೆ ನಡೆದ ಪರೀಕ್ಷಾರ್ಥ ಉಡಾವಣೆ ಹಾಗೂ ಪ್ರಸ್ತುತ ನಡೆಯುತ್ತಿರುವ ಉಡಾವಣೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಜಿಎಸ್ ಎಲ್‌ವಿ ಮಾರ್ಕ್ 3 3650 ಕೆಜಿ ತೂಕದ ಅತ್ಯಾಧುನಿಕ ರಾಕೆಟ್ ಆಗಿದ್ದು, 4 ಸಾವಿರ ಕೆಜಿ ತೂಕದ ಸ್ಪೇಸ್ ಕ್ಯಾಪ್ಸೂಲ್ ಗಳನ್ನು (ಉಪಗ್ರಹಗಳು)ನ್ನು ಹೊರಬಲ್ಲ ಸಾಮರ್ಥ್ಯ ಹೊಂದಿದೆ. ರಾಕೆಟ್ ಗೆ ಕ್ರಯೋಜನಿಕ್ ಇಂಜಿನ್ ಅಳವಡಿಸಿದ್ದು, ಈ ವ್ಯವಸ್ಥೆ ಹೊಂದಿದ ದೇಶದ ಮೊದಲ ರಾಕೆಟ್ ಎಂಬ ಕೀರ್ತಿಗೂ ಜಿಎಸ್ ಎಲ್ ವಿ ಮಾರ್ಕ್ 3 ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


