ಪ್ರಧಾನ ಸುದ್ದಿ

ಬಹುಪತ್ನಿತ್ವ, ನಿಖಾ ಹಲಾಲಾ ಕಾನೂನು ಮಾನ್ಯತೆ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ: ಸುಪ್ರೀಂ ಕೋರ್ಟ್

ಮುಸ್ಲಿಂ ಸಮುದಾಯದಲ್ಲಿ ಚಾಲ್ತಿಯಲ್ಲಿರುವ ಬಹು ಪತ್ನಿತ್ವ ಹಾಗೂ ನಿಖಾ ಹಲಾಲಾ ಆಚರಣೆಯ ಕಾನೂನು ಮಾನ್ಯತೆ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಬಹುಪತ್ನಿತ್ವ, ನಿಖಾ ಹಲಾಲಾ ಕಾನೂನು ಮಾನ್ಯತೆ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ: ಸುಪ್ರೀಂ ಕೋರ್ಟ್
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿರುವ ತ್ರಿವಳಿ ತಲಾಖ್ ವಿವಾದ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮುಸ್ಲಿಂ ಸಮುದಾಯದಲ್ಲಿ ಚಾಲ್ತಿಯಲ್ಲಿರುವ ಬಹು ಪತ್ನಿತ್ವ ಹಾಗೂ  ನಿಖಾ ಹಲಾಲಾ ಆಚರಣೆಯ ಕಾನೂನು ಮಾನ್ಯತೆ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಸೋಮವಾರ ತ್ರಿವಳಿ ತಲಾಖ್ ಬಗೆಗಿನ ವಿಚಾರಣೆಯನ್ನು ಮುಂದುವರೆಸಿದ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ, ಏಕಕಾಲದಲ್ಲಿ  ತ್ರಿವಳಿ ತಲಾಖ್, ಬಹುಪತ್ನಿತ್ವ, ನಿಖಾ ಹಲಾಲಾ ಬಗ್ಗೆ ವಿಚಾರಣೆ ಸಾಧ್ಯವಾಗುವುದಿಲ್ಲ.  ಹೀಗಾಗಿ ಬಹುಪತ್ನಿತ್ವ, ನಿಖಾ ಹಲಾಲಾ ಕಾನೂನು ಮಾನ್ಯತೆ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿತು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೆಹರ್ ನೇತೃತ್ವದ ಪಂಚ ಸದಸ್ಯ  ಪೀಠವು ನಿಖಾ ಹಲಾಲಾ (ನಿಖಾ ಹಲಾಲ್ ಎಂದರೆ ವಿಚ್ಛೇದನದ ಬಳಿಕ ಮಹಿಳೆ ತನ್ನ ಪತಿ ಬಳಿಗೆ ಮರಳಿ ಹೋಗಬೇಕೆಂದರೆ ಬೇರೊಬ್ಬನ ಜತೆ ಮದುವೆಯಾಗುವ ಪ್ರಕ್ರಿಯೆ) ಮತ್ತು ಬಹುಪತ್ನಿತ್ವ ವಿಚಾರಗಳನ್ನು ಮುಂದಿನ  ದಿನಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತೇವೆ. ಪ್ರಸ್ತುತ ತ್ರಿವಳಿ ತಲಾಖ್ ಬಗ್ಗೆ ಮಾತ್ರ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು.

ಇದಕ್ಕೂ ಮೊದಲು ಕೇಂದ್ರ ಸರ್ಕಾರದ ಪರ ತಮ್ಮ ವಾದ ಮಂಡಿಸಿದ ಆಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು, ತ್ರಿವಳಿ ತಲಾಖ್ ನಂತೆಯೇ ನಿಖಾ ಹಲಾಲಾ ಮತ್ತು ಬಹುಪತ್ನಿತ್ವದ ಕುರಿತೂ ಕೂಡ ಸುಪ್ರೀಂ ಕೋರ್ಟ್  ವಿಚಾರಣೆ ನಡೆಸಬೇಕು ಎಂದು ಹೇಳಿದರು. ಅಂತೆಯೇ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದಂತಹ ದೇಶಗಳೇ ಈ ಬಗೆಗಿನ ತಮ್ಮ ನೀತಿಗಳನ್ನು ಬದಲಿಸಿಕೊಂಡಿದ್ದು, ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ಮತ್ತು ಅತೀ ದೊಡ್ಡ  ಜ್ಯಾತ್ಯಾತೀತ ರಾಷ್ಟ್ರವಾಗಿರುವ ಭಾರತ ಮಾತ್ರ ಈ ಬಗ್ಗೆ ಇನ್ನೂ ಚರ್ಚೆಯಲ್ಲಿ ತೊಡಗಿದೆ ಎಂದು ನ್ಯಾಯಾಲಯಕ್ಕೆ ಪರಿಸ್ಥಿತಿ ಕುರಿತು ವಿವರಿಸಿದರು.

ಇದಕ್ಕೆ ಉತ್ತರಿಸಿದ ಪಂಚ ಸದಸ್ಯ ಪೀಠ ಪ್ರಸ್ತುತ ನ್ಯಾಯಾಲಯದ ಬಳಿ ಅಷ್ಟ ಸಮಯವಿಲ್ಲ. ಭವಿಷ್ಯದಲ್ಲಿ ಇನವುಗಳ ಕಾನೂನು ಮಾನ್ಯತೆ ಬಗ್ಗೆ ಖಂಡಿತಾ ಚರ್ಚಿಸುತ್ತೇವೆ ಪ್ರಸ್ತುತ ತ್ರಿವಳಿ ತಲಾಖ್ ಬಗ್ಗೆ ಮಾತ್ರ ವಿಚಾರಣೆ ಸಾಧ್ಯ  ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.