ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವ
ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರು...

Published On :
ಲಖನೌ: ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾವಿರಾರು ಕೋಟಿ ರುಪಾಯಿ ಹಗರಣ ಬಯಲಿಗೆಳೆಯಲಿದ್ದರು ಎಂದು ಉತ್ತರ ಪ್ರದೇಶ ಸಚಿವ ಸುರೇಶ್ ಕುಮಾರ್ ಖನ್ನಾ ಅವರು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.
ವಿಧಾಸಭೆಯಿಂದ ಕೇವಲ ಒಂದು ಕಿ.ಮೀ.ದೂರದಲ್ಲಿರುವ ಭಾರಿ ಭದ್ರತೆಯ ಹಜರತ್ ಗಂಜ್ ಪ್ರದೇಶದಲ್ಲೇ ಐಎಎಸ್ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಇಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ತೀವ್ರ ಗದ್ದಗ ಸೃಷ್ಟಿಸಿದವು.
ಪ್ರತಿಪಕ್ಷಗಳ ಆರೋಪಕ್ಕೆ ಸಂಸದೀಯ ಸಚಿವ ಸುರೇಶ್ ಕುಮಾರ್ ಖನ್ನಾ ಅವರು, ಅನುರಾಗ್ ತಿವಾರಿ ಅವರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದರು. ಅಲ್ಲದೆ ಮೃತ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಒಂದು ದೊಡ್ಡ ಹಗರಣ ಬಯಲಿಗೆಳೆಯಲಿದ್ದರು ಎಂದು ಹೇಳಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಒಬ್ಬ ಐಎಎಸ್ ಅಧಿಕಾರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


