ಅಕ್ರಮ ಗಣಿಗಾರಿಕೆ: ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಪೊಲೀಸ್ ವಶಕ್ಕೆ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ...

Published On :
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ಗುರುವಾರ ವಿಶೇಷ ಕೋರ್ಟ್ ಮೇ 20ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.
ಜಂತಕಲ್ ಮೈನಿಂಗ ಕಂಪೆನಿಯ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ಸೋಮವಾರ ವಿಶೇಷ ತನಿಖಾ ತಂಡ(ಎಸ್ಐಟಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ಬಡೇರಿಯಾ ಅವರನ್ನು ವಶಕ್ಕೆ ಪಡೆಯಲಾಗಿತ್ತು.
ಇತ್ತೀಚಿಗೆ ಸುಪ್ರೀಂ ಕೋರ್ಟ್, ಜಂತಕಲ್ ಮೈನಿಂಗ ಕಂಪೆನಿಯ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ವರದಿಯಲ್ಲಿ ಹೆಸರಿಸಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಎಸ್ಐಟಿಗೆ ನಿರ್ದೇಶನ ನೀಡಿತ್ತು.
ಸಂತೋಷ್ ಹೆಗ್ಡೆ ಅವರ ವರದಿಯಲ್ಲಿ ಗಂಗಾರಾಮ್ ಬಡೇರಿಯಾ ಅವರ ಹೆಸರಿದ್ದು, ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಅಕ್ರಮ ಗಣಿಗಾರಿಕೆಯಲ್ಲಿ ಈ ಐಎಎಸ್ ಅಧಿಕಾರಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಇದೇ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್.ಡಿ. ಕುಮಾರಸ್ವಾಮಿ ಹಾಗೂ ಧರಂ ಸಿಂಗ್ ಅವರ ಹೆಸರು ಕೂಡ ಇದೆ. ಆದರೆ ಎಸ್.ಎಂ. ಕೃಷ್ಣ ಅವರ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪೊಲೀಸ್ ವಶಕ್ಕೆIllegal mining caseಅಕ್ರಮ ಗಣಿಗಾರಿಕೆ ಪ್ರಕರಣGangaram Baderiyaಗಂಗಾರಾಮ್ ಬಡೇರಿಯಾsent to police custody
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


