ಪ್ರಧಾನ ಸುದ್ದಿ

ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!

ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!
ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ (ಸಂಗ್ರಹ ಚಿತ್ರ)
Published On :

ಚಿತ್ರದುರ್ಗ: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಜಿಎಂ ಸಿದ್ದೇಶ್ವರ ಅವರ ಕುಟುಂಬಕ್ಕೆ ಸೇರಿದೆ ದಾವಣಗೆರೆ, ಚಿತ್ರದುರ್ಗದ ನಿವಾಸ ಮತ್ತು ಕಚೇರಿಗಳ ಮೇಲೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಜಿಸಿಕೊಂಡು ಪರಿಶೀಲಿಸುತ್ತಿದ್ದಾರೆ.  ಸಿದ್ದೇಶ್ವರ ಅವರ ಭೀಮಸಮುದ್ರದ ನಿವಾಸ ಸೇರಿದಂತೆ ಅವರ ಒಡೆತನದ ಗುಟ್ಕಾ ಫ್ಯಾಕ್ಟರಿ, ಸಹಕಾರಿ ಬ್ಯಾಂಕ್​ ಹಾಗೂ ಕಾಲೇಜುಗಳ ಮೇಲೆ ಗುರುವಾರ ಏಕ‌ಕಾಲದಲ್ಲಿ ಐಟಿ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.ಇದಲ್ಲದೆ  ದಾವಣಗೆರೆಯ ಜಿ.ಎಂ.ಸೌಹಾರ್ದ ಬ್ಯಾಂಕ್, ಜಿಎಂಐಟಿ ಕಾಲೇಜ್, ಅಡಿಕೆ ಮಂಡಿ ಸೇರಿದಂತೆ ಸಿದ್ದೇಶ್ವರ ಅವರ ಸಹೋದರ ಪ್ರಸನ್ನ ಕುಮಾರ್ ನಿವಾಸದ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.