ಪ್ರಧಾನ ಸುದ್ದಿ

ದಯವಿಟ್ಟು ರಾಜಕೀಯ ಪ್ರಶ್ನೆ ಕೇಳಬೇಡಿ: ರಜನಿಕಾಂತ್

ದಯವಿಟ್ಟು ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಡಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್....

ದಯವಿಟ್ಟು ರಾಜಕೀಯ ಪ್ರಶ್ನೆ ಕೇಳಬೇಡಿ: ರಜನಿಕಾಂತ್
ರಜನಿಕಾಂತ್
Published On :
ಚೆನ್ನೈ: ದಯವಿಟ್ಟು ರಾಜಕೀಯಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬೇಡಿ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಪತ್ರಕರ್ತರಿಗೆ ಮನವಿ ಮಾಡಿದ್ದಾರೆ.
ರಾಜಕೀಯ ಸೇರುವುದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಅವರ ಹೇಳಿಕೆಗಳ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ರಜನಿಕಾಂತ್ ಅವರು, ದಯವಿಟ್ಟು ರಾಜಕೀಯ ಪ್ರಶ್ನೆಗಳನ್ನು ಕೇಳಬೇಡಿ ಎಂದರು.
ಸುಮಾರು 8 ವರ್ಷಗಳ ನಂತರ ತಮ್ಮ ಒಡೆತನದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು.
ಕಳೆದ ವರ್ಷ ರಜನಿ ಹೊಸ ಪಕ್ಷ ಕಟ್ಟುತ್ತಾರೆ. ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿತ್ತು. ಈಗಲೂ ಅವರು ಬಿಜೆಪಿ ಮನವಿಯ ಬಗ್ಗೆ ಯಾವುದೇ ನೇರ ಉತ್ತರ ಕೊಟ್ಟಿಲ್ಲ. ಆದರೆ, ದೇವರಿಚ್ಛಿಸಿದರೆ ನಾಳೆಯೇ ರಾಜಕೀಯ ಸೇರುತ್ತೇನೆ ಎಂದು ಹೇಳುವ ಮೂಲಕ ಸೋಮವಾರವಷ್ಟೇ ರಜನಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.