ಪ್ರಧಾನ ಸುದ್ದಿ

ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು

ಕರ್ನಾಕಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ಕುರಿತು ತನಿಖೆ....

ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಶಿಫಾರಸು
ಅನುರಾಗ್ ತಿವಾರಿ
Published On :
ಲಖನೌ: ಕರ್ನಾಕಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಅನುರಾಗ್ ತಿವಾರಿ ಅವರ ನಿಗೂಢ ಸಾವಿನ ಕುರಿತು ತನಿಖೆ ನಡೆಸುವಂತೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಸೋಮವಾರ ಸಿಬಿಐಗೆ ಶಿಫಾರಸು ಮಾಡಿದೆ. 
ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುತ್ತಿರುವುದಾಗಿ ಉತ್ತರ ಪ್ರದೇಶ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್ ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಅನುರಾಗ್ ತಿವಾರಿ ಕುಟುಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ಐಎಎಸ್ ಅಧಿಕಾರಿಯ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದ್ದರು. ಬಳಿಕ ಲಖೌನನ ಹಜರತ್ ಗಂಜ್ ಪೊಲೀಸ್ ಠಾಣೆಗೆ ತೆರಳಿ ಕೊಲೆ ಪ್ರಕರಣ ದಾಖಲಿಸಿದ್ದರು. 
ಇದರ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಅವರು ಐಎಎಸ್ ಅಧಿಕಾರಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
ಕಳೆದ ಮೇ 17ರಂದು ಲಖನೌನ ಹಜರತ್ ಗಂಜ್ ಮೀರಾಬಾಯ್ ಹೆಸ್ಟ್ ಹೌಸ್ ಬಳಿ 2007ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಶವ ಪತ್ತೆಯಾಗಿತ್ತು. ರಾಜ್ಯದ ಐಎಎಸ್ ಅಧಿಕಾರಿ ತಮ್ಮ 36ನೇ ಹುಟ್ಟುಹಬ್ಬದಂದೆ ನಿಗೂಢವಾಗಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.