ಐಎಎಸ್ ಅಧಿಕಾರಿ ತಿವಾರಿ ಉಸಿರುಗಟ್ಟಿ ಸಾವು: ಮರಣೋತ್ತರ ಪರೀಕ್ಷಾ ವರದಿ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಉಸಿರುಗಟ್ಟಿ....

Published On :
ಲಖನೌ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ.
ವಿಧಿವಿಜ್ಞಾನ ತಜ್ಞ ಅಶೋಕ್ ಕುಮಾರ್ ವರ್ಮಾ ಸೇರಿದಂತೆ ನಾಲ್ವರು ವೈದ್ಯರ ತಂಡ ಅನುರಾಗ್ ತಿವಾರಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದಾರೆ. ಅಲ್ಲದೆ ರಾಸಾಯನಿಕ ವಿಶ್ಲೇಷಣೆಗಾಗಿ ವೈದ್ಯರು ಶ್ವಾಸಕೋಶ ಮತ್ತು ರಕ್ತದ ಮಾದರಿಯನ್ನು ಸಂಗ್ರಹಿಸಿದ್ದು, ಅದನ್ನು ವಿಶೇಷ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್)ಕ್ಕೆ ಕಳುಹಿಸಲಾಗಿದೆ. ಎಫ್ಎಸ್ಎಲ್ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಕಳೆದ ಮೇ 17ರಂದು ಲಖನೌನ ಹಜರತ್ ಗಂಜ್ ಮೀರಾಬಾಯ್ ಹೆಸ್ಟ್ ಹೌಸ್ ಬಳಿ 2007ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಶವ ಪತ್ತೆಯಾಗಿತ್ತು. ರಾಜ್ಯದ ಐಎಎಸ್ ಅಧಿಕಾರಿ ತಮ್ಮ 36ನೇ ಹುಟ್ಟುಹಬ್ಬದಂದೆ ನಿಗೂಢವಾಗಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಉತ್ತರ ಪ್ರದೇಶ ಸರ್ಕಾರ ಈ ಪ್ರಕರವಣನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


