ಪ್ರಧಾನ ಸುದ್ದಿ

ಜುಲೈನಲ್ಲಿ ರಜನಿ ರಾಜಕೀಯ ಪಕ್ಷ ಘೋಷಣೆ: ರಜನಿಕಾಂತ್ ಸಹೋದರ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಜುಲೈ ಅಂತ್ಯದೊಳಗೆ....

ಜುಲೈನಲ್ಲಿ ರಜನಿ ರಾಜಕೀಯ ಪಕ್ಷ ಘೋಷಣೆ: ರಜನಿಕಾಂತ್ ಸಹೋದರ
ರಜನಿಕಾಂತ್
Published On :
ಬೆಂಗಳೂರು: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಜುಲೈ ಅಂತ್ಯದೊಳಗೆ ರಜನಿ ರಾಜಕೀಯ ಪಕ್ಷ ಘೋಷಿಸಲಿದ್ದಾರೆ ಎಂದು ಬೆಂಗಳೂರಿನಲ್ಲಿರುವ ನಟನ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಹೇಳಿದ್ದಾರೆ.
ರಜನಿಕಾಂತ್ ಅವರು ರಾಜಕೀಯಕ್ಕೆ ಪ್ರವೇಶಿಸಬೇಕು ಎಂಬುದು ಜನರ ಆಶಯ. ಹೀಗಾಗಿ ಅವರು ರಾಜಕೀಯ ಪ್ರವೇಶದ ಬಗ್ಗೆ ತಮ್ಮ ಅಭಿಮಾನಿಗಳೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ. ಜೂನ್ ಮತ್ತೆ ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಗಾಯಕ್ವಾಡ್ ಅವರು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಮೇ 15ರಿಂದ 19ರವರೆಗೆ ತಮಿಳುನಾಡಿನ 15 ಜಿಲ್ಲೆಗಳ ತಮ್ಮ ಅಭಿಮಾನಿಗಳೊಂದಿಗೆ ರಜನಿಕಾಂತ್ ಅವರು ರಾಜಕೀಯ ಪ್ರವೇಶಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದು, ಈಗ ತಮ್ಮ ಮುಂದಿನ ಚಿತ್ರ 'ಕಾಳ ಕರಿಕಾಳನ್'ಗಾಗಿ ಬ್ರೇಕ್ ತೆಗೆದುಕೊಂಡಿದ್ದಾರೆ. ಜೂನ್ ಮತ್ತು ಜುಲೈನಲ್ಲಿ ಮತ್ತೆ ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಧಿಕೃತವಾಗಿ ರಾಜಕೀಯ ಪಕ್ಷವೊಂದನ್ನು ಘೋಷಿಸಲಿದ್ದಾರೆ ಎಂದು ಗಾಯಕ್ವಾಡ್ ಅವರು ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್ ಅವರು, ತಮಿಳುನಾಡಿನ ದುರ್ಬಲ ರಾಜಕೀಯ ವ್ಯವಸ್ಥೆ ಅಂತ್ಯಗೊಳ್ಳಬೇಕಿದೆ.ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ನನಗೂ ಕೂಡ ಜವಾಬ್ದಾರಿ ಇದೆ. ಹೀಗಾಗಿ 'ಯುದ್ಧ'ಕ್ಕೆ ಸಿದ್ಧರಾಗಿ ಎಂದು ಕರೆ ನೀಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.