ಕ್ರಿಕೆಟ್ಟಿ20 ಮಾದರಿಯಲ್ಲಿ ಸಹಸ್ರ ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಶುಕ್ರವಾರ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ಸಿಕ್ಸರ್ ಗಳಿಸುವ ಮೂಲಕ ಟಿ20 ಮಾದರಿಯಲ್ಲಿ ಸಾವಿರಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ.