ವಿದೇಶಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ; ಮಕ್ಕಳು ಸೇರಿ 100 ಮಂದಿ ದಾರುಣ ಸಾವು
ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ.