ದೇಶಸಿಬಿಎಸ್ಇ 12ನೇ ತರಗತಿ ಪರೀಕ್ಷೆ: ಭಾನುವಾರ ಮೋದಿ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ
ಬಾಕಿ ಇರುವ 12 ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಭಾನುವಾರ ಉನ್ನತ ಮಟ್ಟದ ಸಭೆ ನಡೆಯಲಿದ್ದು, ರಾಜ್ಯಗಳಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡು ಹಂತಗಳಲ್ಲಿ ಪ್ರಮುಖ ವಿಷಯಗಳಿಗೆ ಪರೀಕ್ಷೆ ನಡೆಸುವ ಅಥವಾ ಆಂತರಿಕ ಮೌಲ್ಯಮಾಪನ ಯೋಜನೆ ರೂಪಿಸುವುದು ಸೇರಿದಂತೆ ಮತ್ತಿತರ ಸಲಹೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.