ದೇಶಕೋವಿಡ್ ಚೇತರಿಕೆ ಪ್ರಮಾಣ ಶೇ 63.02ಕ್ಕೆ ಏರಿಕೆ: 19 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಅಧಿಕ
ಶ್ರೇಣೀಕೃತ ನೀತಿ ಮತ್ತು ಸಮಗ್ರ ವಿಧಾನಗಳಿಂದ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,850 ಜನರು ಕೊವಿಡ್ ಸೋಂಕಿನಿಂದ ಚೇತರಿಸಿಕೊಳ್ಳಲು ಕಾರಣವಾಗಿದ್ದು, ಇದರೊಂದಿಗೆ ಚೇತರಿಸಿಕೊಂಡ ಪ್ರಕರಣಗಳ ಒಟ್ಟು ಸಂಖ್ಯೆ 5,53,470 ಕ್ಕೆ ತಲುಪಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.