ರಾಜ್ಯ'ಎಣ್ಣೆ'ಯ ಮತ್ತಿನಲ್ಲಿ ಮಿಂದೆದ್ದ ಜನತೆ: ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ; 193 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ!
2023ರ ಕೊನೆಯ ದಿನವಾದ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ. ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ.