ರಾಜ್ಯನಟ ದರ್ಶನ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿ ತಿರುಚಲು ಪ್ರಯತ್ನ 'ಹೃದಯಾಘಾತ' ಎಂದು ತೋರಿಸಲು ವೈದ್ಯರಿಗೆ ರೂ.1 ಕೋಟಿ ಆಫರ್!
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಿದಾಗಿನಿಂದ ಬೆಚ್ಚಿಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿಗಳು ನೀಡಿದ ಚಿತ್ರಹಿಂಸೆಯಿಂದ ಉಂಟಾದ ಆಘಾತ ಮತ್ತು ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.