ದೇಶಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ನೌಗಾಮ್ ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಓರ್ವ ಪೊಲೀಸ್ ಗಂಭೀರ್ ಗಾಯ
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.