ದೇಶಗೋಧ್ರಾ ರೈಲು ದಹನ ಪ್ರಕರಣ: 8 ಅಪರಾಧಿಗಳಿಗೆ ಜಾಮೀನು ಮಂಜೂರು, ನಾಲ್ವರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
2002ರಲ್ಲಿ ಗುಜರಾತ್ನಲ್ಲಿ ನಡೆದ ಗೋಧ್ರಾ ರೈಲು ದಹನ ಪ್ರಕರಣದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣದಲ್ಲಿನ ಅವರ ಗಂಭೀರ ಪಾತ್ರವನ್ನು ಗಮನಿಸಿ ಇತರ ನಾಲ್ವರಿಗೆ ಜಾಮೀನು ನಿರಾಕರಿಸಿದೆ.