2024 Lok Sabha election
ಕರ್ನಾಟಕದ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಡಿಕೆ ಶಿವಕುಮಾರ್ ವಿಶ್ವಾಸ
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

'ಪ್ರಜ್ವಲ್ ಸೋಲಿಸಿ ಗೌಡರ ಕುಟುಂಬಕ್ಕೆ ಶಿಕ್ಷೆ ಕೊಡಬೇಡಿ, ನಮ್ಮಿಂದ ಏನಾದ್ರು ತಪ್ಪುಗಳಾಗಿದ್ದರೆ ಕ್ಷಮಿಸಿ': ಹಾಸನದಲ್ಲಿ ಕಾರ್ಯಕರ್ತರ ಮುಂದೆ ದೇವೇಗೌಡ ಅಂಡ್ ಸನ್ಸ್ ಭಾವುಕ!
ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಇನ್ನೂ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಜ್ವಲ್ ರೇವಣ್ಣ ಪುನಾರಾಯ್ಕೆಗೆ ಸ್ಪರ್ಧಿಸುವ ಎಲ್ಲಾ ಸಾಧ್ಯತೆಗಳಿವೆ.

ಸಿಎಎ ಅಧಿಸೂಚನೆ ಹೊರಡಿಸಿರುವುದು 'ಗಿಮಿಕ್', ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯ್ದೆಯ ಅಧಿಸೂಚನೆ ಹೊರಡಿಸಿರುವುದು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ 'ಗಿಮಿಕ್' ಆಗಿದ್ದು, ಕರ್ನಾಟಕದಲ್ಲಿ ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

'ಅವಮಾನ'ವಾದರೆ ನಮ್ಮೊಂದಿಗೆ ಸೇರಿ, ನಿಮ್ಮನ್ನು ಖಂಡಿತ ಗೆಲ್ಲಿಸುತ್ತೇವೆ: ನಿತಿನ್ ಗಡ್ಕರಿಗೆ ಉದ್ಧವ್ ಠಾಕ್ರೆ
ನಿಮಗೆ 'ಅವಮಾನ'ವಾಗುತ್ತಿದ್ದರೆ ಬಿಜೆಪಿ ತೊರೆಯುವಂತೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಲಹೆ ನೀಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಪ್ರತಿಪಕ್ಷಗಳು ತಮ್ಮ ಗೆಲುವನ್ನು ಖಚಿತಪಡಿಸುತ್ತವೆ ಎಂದಿದ್ದಾರೆ.

2024 ಲೋಕಸಭಾ ಚುನಾವಣೆ: 7-8 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಳರಿಂದ ಎಂಟು ಸಚಿವರು ಸ್ಪರ್ಧಿಸಬೇಕು ಎಂಬ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ, 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರಾಗಬೇಕು ಎಂಬುದನ್ನು ಪಕ್ಷವು ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದ ಬಿಜೆಪಿ, ಆದರೆ ಶೇ.42ರಷ್ಟು ಪದವೀಧರರು ನಿರುದ್ಯೋಗಿ!
ನ್ಯಾಯ ಮತ್ತು ಸಾಮರಸ್ಯದ ವೇದಿಕೆ ಬಹುತ್ವ ಕರ್ನಾಟಕ ಬಿಡುಗಡೆ ಮಾಡಿದ ವರದಿ

ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ: ನಾಮಪತ್ರ ಹಿಂಪಡೆಯುವ ಮುನ್ನ ಯಾವಾಗ ಬೇಕಾದರೂ ಮೈತ್ರಿ ಸಾಧ್ಯತೆ- ಕಾಂಗ್ರೆಸ್
ಪಶ್ಚಿಮ ಬಂಗಾಳದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಟಿಎಂಸಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ, ನಾಮಪತ್ರ ಹಿಂಪಡೆಯುವವರೆಗೂ ಮೈತ್ರಿಗೆ ತನ್ನ ಬಾಗಿಲು ತೆರೆದಿದೆ ಮತ್ತು ಯಾವುದೇ ಒಪ್ಪಂದವನ್ನು ಮಾತುಕತೆಗಳಿಂದ ಅಂತಿಮಗೊಳಿಸಬೇಕು ಹೊರತು ಏಕಪಕ್ಷೀಯ ಪ್ರಕಟಣೆಗಳಿಂದ ಅಲ್ಲ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ.

ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ; ಕ್ರಿಕೆಟಿಗ ಯೂಸುಫ್ ಪಠಾಣ್, ಕೃಷ್ಣನಗರದಿಂದ ಮಹುವಾ ಮೊಯಿತ್ರಾ ಕಣಕ್ಕೆ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ.

ಹರಿಯಾಣ: ಪಕ್ಷಕ್ಕೆ ರಾಜೀನಾಮೆ ನೀಡಿದ ಹಿಸ್ಸಾರ್ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್; ಕಾಂಗ್ರೆಸ್ ಸೇರ್ಪಡೆ
ಲೋಕಸಭೆ ಚುನಾವಣೆಗೆ ಮುನ್ನ, ಹರಿಯಾಣ ಹಿಸ್ಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

