2024 Lok Sabha Elections

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ, ರಾಹುಲ್ ಗಾಂಧಿ ಪ್ರಧಾನಿ; ಯೂತ್ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿ
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಮತ್ತು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂಬ ಘೋಷಣೆ ಗುರುವಾರ ಇಲ್ಲಿ ಆರಂಭವಾದ ಮೂರು ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಪ್ರತಿಧ್ವನಿಸಿತು.

ಯಾವತ್ತೂ ಪಕ್ಷದ ಟಿಕೆಟ್ ಕೇಳಿಲ್ಲ, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತೆ: ತೇಜಸ್ವಿನಿ ಅನಂತ್ ಕುಮಾರ್
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ ಕೇವಲ ಸೌಜನ್ಯದ ಭೇಟಿಯಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಾನು ಎಂದಿಗೂ ಪಕ್ಷದ ಟಿಕೆಟ್ ಕೇಳಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ಕುಮಾರ್ ಭಾನುವಾರ ಹೇಳಿದ್ದಾರೆ.

ಮೋದಿ ಮಣಿಸಲು ಒಗ್ಗಟ್ಟಿನ ಮಂತ್ರ: ವಿರೋಧ ಪಕ್ಷಗಳ ಮುಂದಿನ ಸಭೆ ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ?
2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ಸಭೆಯಲ್ಲಿ ಜಮಾಯಿಸಿರುವ ವಿರೋಧ ಪಕ್ಷದ ನಾಯಕರು, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಮತ್ತೊಮ್ಮೆ ಸಭೆ ನಡೆಸುವ ನಿರೀಕ್ಷೆಯಿದೆ.

ಮೋದಿ, ಅಮಿತ್ ಶಾ ಕುರಿತಾದ ವ್ಯಂಗ್ಯವಾಡುವ ವಿಡಿಯೋ ಹಂಚಿಕೊಂಡ ಕಾಂಗ್ರೆಸ್; ರಾಹುಲ್ ಗಾಂಧಿ ಬಗ್ಗೆ ಹೇಳಿದ್ದೇನು?
ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' ನೊಂದಿಗೆ ಬದಲಾಯಿಸುತ್ತಿದ್ದಾರೆ ಎಂಬ ಸಂದೇಶ ಸಾರಿದೆ.

2024ರಲ್ಲಿ ಮತ್ತೊಂದು ಚುನಾವಣೆ; ಮತ್ತೆ ಗ್ಯಾಸ್, ಪೆಟ್ರೋಲ್, ರಸಗೊಬ್ಬರಗಳ ಬೆಲೆ ಇಳಿಸುವ ಭರವಸೆ ನೀಡಿದ ಸಿದ್ದರಾಮಯ್ಯ!
ಮತ್ತೊಂದು ಚುನಾವಣೆಗೆ, ಮತ್ತೊಂದಿಷ್ಟು ಭರವಸೆಗಳು. ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ರಸಗೊಬ್ಬರ, ಪೆಟ್ರೋಲ್, ಗೃಹಬಳಕೆಯ ಗ್ಯಾಸ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಪ್ರತಿಪಕ್ಷಗಳ ಒಗ್ಗಟ್ಟು: ರಾಹುಲ್ ಗಾಂಧಿ ಹೇಳಿಕೆಗೆ ಸಂಜಯ್ ರಾವುತ್ ಬೆಂಬಲ; 2024ರಲ್ಲಿ ಬಿಜೆಪಿ ಸೋಲಿಸುತ್ತೇವೆ ಎಂದ ನಾಯಕ
ಸಂಸದ ಸಂಜಯ್ ರಾವತ್ ಶುಕ್ರವಾರ ರಾಹುಲ್ ಗಾಂಧಿಯವರ ವಿರೋಧ ಪಕ್ಷದ ಒಗ್ಗಟ್ಟಿನ ಹೇಳಿಕೆಯನ್ನು ಬೆಂಬಲಿಸಿದರು ಮತ್ತು 2024 ರಲ್ಲಿ ನಾವು ಪ್ರಸ್ತುತ ಸರ್ಕಾರ (ಬಿಜೆಪಿ) ಅನ್ನು ಸೋಲಿಸುತ್ತೇವೆ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಲಿದೆ: ನಿತಿನ್ ಗಡ್ಕರಿ
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ: 22 ಸ್ಥಾನಗಳಿಗೆ ಬೇಡಿಕೆ ಇಟ್ಟ ಶಿಂಧೆ ನೇತೃತ್ವದ ಶಿವಸೇನೆ
2024ರ ಲೋಕಸಭೆ ಚುನಾವಣೆಗೆ ಹಲವು ರಾಜಕೀಯ ಪಕ್ಷಗಳು ಈಗಲೇ ಸಿದ್ಧತೆ ಆರಂಭಿಸಿದ್ದು, ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

