2024 Loksabha Election

ಜನತಾ ದಳ ಎಂಬ ಹೆಸರನ್ನು 'ಕಮಲ ದಳ' ಎಂದು ಬದಲಿಸಿ ಎಂದ ಕಾಂಗ್ರೆಸ್; ಜೆಡಿಎಸ್ ತಿರುಗೇಟು, ಎಚ್‌ಡಿ ಕುಮಾರಸ್ವಾಮಿ ಕಿಡಿ
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ವಿಚಾರವಾಗಿ ಜೆಡಿಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿವೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ: ಬಸವರಾಜ ಬೊಮ್ಮಾಯಿ
ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ- ಸಿಟಿ ರವಿ
2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಜೊತೆಗೆ ಯಾವುದೇ ಶೀತಲ ಸಮರ ಇಲ್ಲ; 2024ರ ಲೋಕಸಭೆ ಚುನಾವಣೆಗೆ ಒಟ್ಟಿಗೆ ಕೆಲಸ: ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರೀತಿಯ ಶೀತಲ ಸಮರದ ಬಗ್ಗೆ ನನಗೆ ತಿಳಿದಿಲ್ಲ. ಈ ಕೋಲ್ಡ್ ವಾರ್, ಹಾಟ್ ವಾರ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಶೇ.80ರಷ್ಟು ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಒಲವು: ಸಮೀಕ್ಷೆ
2024ರ ಲೋಕಸಭಾ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿರುವಂತೆಯೇ ಇತ್ತ ದೇಶದ ಶೇ.80ರಷ್ಟು ಭಾರತೀಯರು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಒಲವು ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್
ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ.

