2024 Loksabha Elections

ಶಿವಮೊಗ್ಗ ಟಿಕೆಟ್ ಬಗ್ಗೆ ಕಾಂಗ್ರೆಸ್ ವರಿಷ್ಠರು ನಿರ್ಧಿರಿಸುತ್ತಾರೆ: ಗೀತಾ ಶಿವರಾಜಕುಮಾರ್
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕೆಂಬುದನ್ನು ಪಕ್ಷದ ಕೇಂದ್ರ ನಾಯಕರು ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜಕುಮಾರ್ ಹೇಳಿದ್ದಾರೆ.

'ಇದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ...': ಬಿಎಸ್‌ಪಿಗೆ ರಾಜೀನಾಮೆ ನೀಡಿದ ಸಂಸದ ರಿತೇಶ್ ಪಾಂಡೆ, ಬಿಜೆಪಿ ಸೇರ್ಪಡೆ
ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಬಿಎಸ್‌ಪಿ ಲೋಕಸಭಾ ಸಂಸದ ರಿತೇಶ್ ಪಾಂಡೆ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

10 ವರ್ಷಗಳಲ್ಲಿ 11 ರೈಲು ತಂದಿದ್ದೀನಿ, ಮೈಸೂರು-ರಾಮೇಶ್ವರಂ 12ನೇ ರೈಲು ಬರಲಿದೆ: ಪ್ರತಾಪ್ ಸಿಂಹ
ಶೀಘ್ರದಲ್ಲಿಯೇ ಬೆಂಗಳೂರು-ಮೈಸೂರು ಮೆಟ್ರೋ ರೈಲು

ಕಾಂಗ್ರೆಸ್‌ನಲ್ಲಿ ಒಳಜಗಳ: ಲೋಕಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರವನ್ನೇ ಬುಡಮೇಲು ಮಾಡುವ ಭೀತಿ
ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಹೈಲೈಟ್ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಹತ್ತಿರವಾಗಲು ಹವಣಿಸುತ್ತಿರುವ ಈ ಹೊತ್ತಿನಲ್ಲಿ, ವಿಧಾನಸಭಾ ಚುನಾವಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್‌ನಲ್ಲಿ ಒಳಜಗಳ ತಾರಕಕ್ಕೇರಿದೆ ಎನ್ನಲಾಗುತ್ತಿದೆ.

ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಕೆಲವರು ಸೇರಿ ಹಲವರಿಂದ ಒತ್ತಡವಿದೆ: ಡಿವಿ ಸದಾನಂದ ಗೌಡ
ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡವಿದೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮಿಷನ್ 2024: ಈ 160 ಲೋಕಸಭಾ ಸ್ಥಾನಗಳ ಮೇಲೆ ಬಿಜೆಪಿ ಕಣ್ಣು: ಕಾರಣವೇನು ತಿಳಿಯಿರಿ...
ದೇಶದಾದ್ಯಂತ ಲೋಕಸಭೆ ಚುನಾವಣೆಯ ಕಾವು ಏರುತ್ತಿದ್ದು, ಎಲ್ಲಾ ಪಕ್ಷಗಳು ಮುಂದಿನ ಚುನಾವಣೆಯನ್ನು ಗೆದ್ದೇ ತೀರುವ ತವಕದಲ್ಲಿ ತಂತ್ರಗಳನ್ನು ರೂಪಿಸುತ್ತಿವೆ. ಇದೀಗ ಬಿಜೆಪಿ ಕೂಡ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಮತ್ತೆ ಮೂರನೇ ಬಾರಿಗೆ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ: ಸಿಪಿ ಯೋಗೇಶ್ವರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ ಯೆಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ.

ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ, ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿವಿ ಸದಾನಂದ ಗೌಡ
ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಇದೀಗ ಈ ಸಾಲಿಗೆ ಸಂಸದ ಡಿವಿ ಸದಾನಂದ ಗೌಡ ಸೇರಿದ್ದಾರೆ.

ಕೆಲವು ಕುಟುಂಬಗಳ ಹಿತಾಸಕ್ತಿ ಕಾಪಾಡುವುದೇ INDIA ದ ಉದ್ದೇಶ, ಅದೊಂದು 'ಸ್ವಾರ್ಥ ಮೈತ್ರಿ': ಬಿಜೆಪಿ
ಇಂದು ಮುಂಬೈನಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ನಡೆಯುತ್ತಿದ್ದು, ತನ್ನ ಮೈತ್ರಿಕೂಟದ ಸದಸ್ಯ ಪಕ್ಷಗಳ ಚುಕ್ಕಾಣಿ ಹಿಡಿದಿರುವ ಕುಟುಂಬಗಳ ಹಿತಾಸಕ್ತಿಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಗುರಿಯನ್ನು ಹೊಂದಿರುವ 'ಸ್ವಾರ್ಥ ಮೈತ್ರಿ'ಯೇ ಇಂಡಿಯಾ ಒಕ್ಕೂಟ ಎಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಟೀಕಿಸಿದೆ.

