2024 ರ ಲೋಕಸಭಾ ಚುನಾವಣೆ

ಇಂದು ಮೋದಿ ಕ್ಯಾಬಿನೆಟ್ ಸಭೆ: NDA ಮಿತ್ರಪಕ್ಷಗಳ ನಾಯಕರ ಭೇಟಿ!
ಲೋಕಸಭಾ ಚುನಾವಣೆ 2024 ರ ಫಲಿತಾಂಶ ಪ್ರಕಟಗೊಂಡಿದ್ದು ಎನ್ ಡಿಎ ಗೆ ಬಹುಮತ ದೊರೆತಿದೆ. ಹೊಸ ಸರ್ಕಾರ ರಚನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಈ ಹಿಂದಿನ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯನ್ನು ನಾಳೆ ನಡೆಸಲಿದ್ದಾರೆ.

ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ
2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ: ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷಗಳ ಮುಖಂಡರ ನಡುವೆ ಮಾತುಕತೆ ನಡೆದಿದೆ ಎಂಬ ವರದಿಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿವೆ.

ಶೇ.80ರಷ್ಟು ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಒಲವು: ಸಮೀಕ್ಷೆ
2024ರ ಲೋಕಸಭಾ ಚುನಾವಣೆಗೆ ದೇಶದ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ನಡೆಸಿರುವಂತೆಯೇ ಇತ್ತ ದೇಶದ ಶೇ.80ರಷ್ಟು ಭಾರತೀಯರು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಒಲವು ಹೊಂದಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

2024 ಚುನಾವಣೆ: ದೇಶದ ಹಿತಕ್ಕಾಗಿ ಕಾಂಗ್ರೆಸ್ ನೊಂದಿಗಿನ ಕಹಿ ಮರೆಯಲು ಮಮತಾ ಸಿದ್ಧ- ಪವಾರ್
ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

