ರಾಜ್ಯದಾವೋಸ್: 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗೆ ರಾಜ್ಯದ ಅಂಕಿತ; ವಿಜಯಪುರದಲ್ಲಿ ಲುಲು ಆಹಾರ ಸಂಸ್ಕರಣಾ ಘಟಕ
ಸ್ವಿಟ್ಜರ್ಲೆಂಡಿನ ಈ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.