ಕ್ರಿಕೆಟ್ಐಪಿಎಲ್ ಫೈನಲ್ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆಯಲು ಧೋನಿ ಸಜ್ಜು: ಈ ಸಾಧನೆ ಮಾಡಿದ ಮೊದಲ ಆಟಗಾರ!
2023ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣ ಫೈನಲ್ ಪಂದ್ಯಕ್ಕೆ ಅದ್ದೂರಿ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕಪ್ ಗೆಲ್ಲೋದ್ಯಾರು ಎನ್ನುವ ಕುತೂಹಲ ಹೆಚ್ಚಾಗಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.