ದೇಶ'ಕಾರ್ಗಿಲ್ ವಿಜಯ ದಿವಸ್' 25 ವರ್ಷ: ಇತಿಹಾಸದ ಮೆಲುಕು; ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ಇಂದು ಭೇಟಿ
ಜುಲೈ 14, 1999 ರಂದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಪರೇಷನ್ ವಿಜಯ್ ಯಶಸ್ವಿಯಾಗಿದೆ ಎಂದು ಘೋಷಿಸಿದರು. ಕಾರ್ಗಿಲ್ ಗಡಿ ನಿಯಂತ್ರಣ ರೇಖೆಯ (LC) ಭಾರತದ ಭಾಗದಲ್ಲಿ ಪಾಕಿಸ್ತಾನ ಸೇನೆ ಬೆಂಬಲಿತ ಶಸ್ತ್ರಸಜ್ಜಿತ ಭಯೋತ್ಪಾದಕರ ಅಪ್ರಚೋದಿತ ಒಳನುಗ್ಗುವಿಕೆಯಿಂದಾಗಿ 'ಆಪರೇಷನ್ ವಿಜಯ್' ಆರಂಭವಾಗಿತ್ತು.