ಸಿನಿಮಾ ಸುದ್ದಿನಾನು ಕನ್ನಡ ಸಿನಿಮಾದ ಭಾಗವೇ ಹೊರತು, ಇಂಡಸ್ಟ್ರಿಯ ಕುತಂತ್ರಗಳಿಗಲ್ಲ: ಚಿತ್ರರಂಗದಲ್ಲಿ 26 ವರ್ಷ ಪೂರೈಸಿದ ದರ್ಶನ್ ಮಾತು!
ಮಾಸ್ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ನೆಲೆ ಕಂಡುಕೊಂಡ ದರ್ಶನ್ ಇತ್ತೀಚಿನ ವರ್ಷಗಳಲ್ಲಿ ಕಥೆಗಳ ಆಯ್ಕೆಯಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಸಿನಿಮಾಗಳಲ್ಲಿ ನಟಿಸಿ ಗೆಲ್ಲುತ್ತಿದ್ದಾರೆ. ಈಗಾಗಲೇ 50ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ದರ್ಶನ್ ದೊಡ್ಡ ಅಭಿಮಾನಿಗಳ ಬಳಗ ಸೃಷ್ಟಿಸಿಕೊಂಡಿದ್ದಾರೆ.