ರಾಜ್ಯಮೈಸೂರು ವಿವಿಗೆ 27ನೇ ಶ್ರೇಣಿ: ಸಚಿವ ಸೋಮಶೇಖರ್ ಅಭಿನಂದನೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರ್ಯಾಂಕಿಂಗ್ ಫ್ರೇಮ್ ಪ್ರಶಸ್ತಿಗೆ ಮೈಸೂರು ವಿಶ್ವವಿದ್ಯಾಲಯ ಪಾತ್ರವಾಗಿದ್ದು, 27ನೇ ಶ್ರೇಣಿ (Rank) ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಮೂಲಕ ಮೈಸೂರು ವಿಶ್ವವಿದ್ಯಾಲಯಕ್ಕೆ ಮತ್ತೊಂದು ಗರಿ ಮೂಡಿದಂತಾಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.