ದೇಶಡಿಆರ್ ಡಿಒ ಅಭಿವೃದ್ಧಿಪಡಿಸಿರುವ 2ಡಯಾಕ್ಸಿ-ಡಿ-ಗ್ಲೂಕೋಸ್ ಔಷಧಿ ಬಿಡುಗಡೆ: ಕೊರೋನಾ ವಿರುದ್ಧ ಪರಿಣಾಮಕಾರಿ ಎಂದ ಕೇಂದ್ರ ಸಚಿವರು
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ಅಭಿವೃದ್ಧಿಪಡಿಸಿರುವ ಕೋವಿಡ್ ವಿರುದ್ಧ ರೋಗಿಗಳಿಗೆ ನೀಡುವ ಔಷಧಿ 2ಡಯಾಕ್ಸಿ-ಡಿ-ಗ್ಲೂಕೋಸ್ ನ್ನು ಸೋಮವಾರ ದೆಹಲಿಯಲ್ಲಿ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಡುಗಡೆ ಮಾಡಿದರು.