ರಾಜ್ಯಮಡಿಕೇರಿಯ 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ಮತ್ತೆ ಭೂಕುಸಿತ: ಭಾರೀ ಶಬ್ದಕ್ಕೆ ಬೆಚ್ಚಿದ ಗ್ರಾಮಸ್ಥರು
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ಮೊನ್ನೆ ಸೋಮವಾರ ರಾತ್ರಿ ಮತ್ತೆ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ ಕೆಲವು ನಿಮಿಷಗಳ ಮೊದಲು, ಇಲ್ಲಿನ ನಿವಾಸಿಗಳಿಗೆ ದೊಡ್ಡ ಶಬ್ದ ಕೇಳಿಸಿತು. ಭೂಕುಸಿತದಿಂದಾಗಿ ಗ್ರಾಮಸ್ಥರು ಅಳವಡಿಸಿದ್ದ ತಾತ್ಕಾಲಿಕ ಸೇತುವೆಯೂ ಕೊಚ್ಚಿ ಹೋಗಿದೆ.