ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ 328 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ.