ರಾಜ್ಯರಾಜ್ಯದಲ್ಲಿ ಲಾಕ್ ಡೌನ್ ಸಡಿಲ: ಶೇ.33 ರಷ್ಟು ಐಟಿ-ಬಿಟಿ ಸಿಬ್ಬಂದಿಗೆ, ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಸ್ವಲ್ಪ ಸಡಿಲ ಮಾಡಲಾಗಿದ್ದು, ಏಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.