ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಂಸತ್ತಿನಲ್ಲಿ ಮಂಗಳವಾರ ಗೃಹ ವ್ಯವಹಾರಗಳ ಸಚಿವಾಲಯ(MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ.