370 ವಿಧಿ

ಜಮ್ಮು-ಕಾಶ್ಮೀರ: 7 ತಿಂಗಳ ಗೃಹ ಬಂಧನದ ಬಳಿಕ ಒಮರ್ ಅಬ್ದುಲ್ಲಾ ಬಿಡುಗಡೆ
ಸಂವಿಧಾನದ 370ನೇ ವಿಧಿ ರದ್ಧತಿ ಬಳಿಕ ಗೃಹ ಬಂಧನಕ್ಕೊಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 7 ತಿಂಗಳ ಬಳಿಕ ಮಂಗಳವಾರ ಬಿಡುಗಡೆಗೊಂಡಿದ್ದಾರೆ.

ಭಾರತದ ವರ್ಚಸ್ಸು ಹಾಳು ಮಾಡಲು ಟ್ರಂಪ್ ಭೇಟಿ ವೇಳೆ ದೆಹಲಿ ಹಿಂಸಾಚಾರ ನಡೆಸಲಾಗಿದೆ: ಜೆಪಿ ನಡ್ಡಾ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಭೇಟಿ ವೇಳೆ ದೆಹಲಿಯಲ್ಲಿ ಹಿಂಸಾಚಾರ ಸೃಷ್ಟಿಸುವ ಮೂಲಕ ಭಾರತದ ವರ್ಚಸ್ಸು ಹಾಳು ಮಾಡಲು ಯತ್ನ ನಡೆಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹೇಳಿದ್ದಾರೆ.

370ನೇ ವಿಧಿ ರದ್ದು: ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಸುಪ್ರೀಂಕೋರ್ಟ್ ನಕಾರ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿದ ಹಾಗೂ ರಾಜ್ಯದ ವಿಭಜನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು 7 ಮಂದಿ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

370 ವಿಧಿ ರದ್ದು: 145 ದಿನಗಳ ಬಳಿಕ ಕಾರ್ಗಿಲ್'ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಪುನರಾರಂಭ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370 ವಿಧಿ ರದ್ದುಗೊಂಡು 145 ದಿನಗಳ ಬಳಿಕ ಲಡಾಖ್'ನ ಕಾರ್ಗಿಲ್ ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ: ಕೇಂದ್ರಕ್ಕೆ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನೆಷ್ಟು ದಿನ ನಿರ್ಬಂಧ ಮುಂದುವರೆಯಲಿದೆ. ನಿರ್ಬಂಧ ಮುಂದುವರೆಸಲು ಇನ್ನೆಷ್ಟು ದಿನ ಉದ್ದೇಶ ಹೊಂದಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಪ್ರಶ್ನಿಸಿದೆ.

370 ವಿಧಿ ರದ್ದತಿಗೂ ಮುನ್ನ ಜಮ್ಮು-ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು: ಎಸ್.ಜೈಶಂಕರ್
ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಬುಧವಾರ ಹೇಳಿದ್ದಾರೆ.

ಶ್ಯಾಮ್ ಪ್ರಸಾದ್ ಮುಖರ್ಜಿ ಕಾಶ್ಮೀರ ವಿಶೇಷ ಸ್ಥಾನಮಾನಕ್ಕೆ ಬೆಂಬಲಿಸಿದ್ದರು: ವೀರಪ್ಪ ಮೊಯಿಲಿ
ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ರ ವಿಧಿಗೆ ಮಾಜಿ ಪ್ರಧಾನಿ ಪಂ.ಜವಾಹರ್ ಲಾಲ್ ನೆಹರು ಸಂಪುಟದಲ್ಲಿದ್ದ ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಸಹ ಬೆಂಬ....

ಜಮ್ಮು- ಕಾಶ್ಮೀರ ಜನರ ನಂಬಿಕೆಗೆ ದ್ರೋಹ- ಒಮರ್ ಅಬ್ದುಲ್ಲಾ
ಸಂವಿಧಾನದ 370 ನೇ ವಿಧಿ ರದ್ದುಪಡಿಸಿ ಆದೇಶ ಹೊರಡಿಸಿರುವ ಕೇಂದ್ರಸರ್ಕಾರದ ಕ್ರಮಕ್ಕೆ ಆಘಾತಕಾರಿಯಾಗಿದೆ ಎಂದಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಜಮ್ಮು- ಕಾಶ್ಮೀರದ ಜನರ ನಂಬಿಕೆಗೆ ಬಗೆದ ದ್ರೋಹ ಎಂದು ಟೀಕಿಸಿದ್ದಾರೆ.

ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ 370 ನೇ ವಿಧಿ ರದ್ದು- ಅಮಿತ್ ಶಾ
ಸಂಸತ್ತಿನ ಉಭಯ ಸದನಗಳಲ್ಲಿ ಬಿಜೆಪಿ ಬಹುಮತ ಪಡೆದ ನಂತರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

