ರಾಜ್ಯಸಂತ್ರಸ್ತರ ಸ್ಥಾನದಲ್ಲಿ ನಿಂತು ಸರ್ಕಾರ ಸಿಆರ್ಪಿಸಿ 372ರಡಿ ಮೇಲ್ಮನವಿ ಸಲ್ಲಿಸಲಾಗದು: ಹೈಕೋರ್ಟ್
ಅಪರಾಧ ದಂಡ ಸಂಹಿತೆ ಸೆಕ್ಷನ್ 372 ಅಡಿ ರಾಜ್ಯ ಸರ್ಕಾರವು ತಾನೇ ಸಂತ್ರಸ್ತ ಎಂದು ಪರಿಗಣಿಸಿ ಆರೋಪಿಗಳು ಖುಲಾಸೆಯಾಗಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.