ಕ್ರೀಡೆ2036ರ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂದು ಗೋವಾದ ಮರ್ಗೋವಾದಲ್ಲಿರುವ ಪಂಡಿತ್ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ 37 ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಪಟುಗಳನ್ನುದ್ದೇಶಿಸಿ ಮಾತನಾಡಿದ ಅವರು, 2036ರ ಒಲಿಂಪಿಕ್ಸ್ಗೆ ಆತಿಥ್ಯ ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.