40 ಪರ್ಸೆಂಟ್ ಕಮಿಷನ್

40 ಪರ್ಸೆಂಟ್ ಕಮಿಷನ್ ಆರೋಪ: ಆಯೋಗಕ್ಕೆ ವರದಿ ಸಲ್ಲಿಸಲು ಗಡುವು ವಿಧಿಸಿದ ಹೈಕೋರ್ಟ್
ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಆಯೋಗಕ್ಕೆ 45 ದಿನಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಶೇ 40ರಷ್ಟು ಕಮಿಷನ್ ಆರೋಪಗಳನ್ನು ಪುರಾವೆ ಸಹಿತ ಸಾಬೀತು ಪಡಿಸಿ: ಕಾಂಗ್ರೆಸ್ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ಹಿಂದಿನ ಬಿಜೆಪಿ ಆಡಳಿತದಲ್ಲಿ 40 ಪರ್ಸೆಂಟ್ ಕಮಿಷನ್ ಇತ್ತು ಎಂಬುದನ್ನು ಸಾಕ್ಷಿ ಸಮೇತ ಸಾಬೀತುಪಡಿಸಬೇಕು ಎಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಒತ್ತಾಯಿಸಿದ್ದಾರೆ.

ಕಟ್ಟೋಣ ನಾವು 40 ಪರ್ಸೆಂಟ್ ಇಲ್ಲದ ನಾಡೊಂದನ್ನು, ಪ್ರಗತಿ ಪರ ಕರ್ನಾಟಕವನ್ನು!: ರಾಹುಲ್ ಗಾಂಧಿ ಟ್ವೀಟ್
ಕರ್ನಾಟಕದಲ್ಲಿ ಪ್ರಗತಿಪರ ಮತ್ತು ಶೇ 40ರಷ್ಟು ಕಮಿಷನ್ ಮುಕ್ತ ರಾಜ್ಯವನ್ನು ನಿರ್ಮಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಕರ್ನಾಟಕ ಜನತೆಗೆ ಮನವಿ ಮಾಡಿದ್ದಾರೆ.

ಮೇ 10ರಂದು ಕರ್ನಾಟಕ ಜನ 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಅಂತ್ಯ ಹಾಡಲಿದ್ದಾರೆ: ಪ್ರಧಾನಿಗೆ ಕಾಂಗ್ರೆಸ್ ತಿರುಗೇಟು
ಮೇ 10ರಂದು ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕರ್ನಾಟಕದ ಜನರು ಕೊನೆಗೊಳಿಸಲಿದ್ದಾರೆ ಮತ್ತು ಕಾಂಗ್ರೆಸ್ ತಾನು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಎಂದು 'ಕಾಂಗ್ರೆಸ್ ಪಕ್ಷವು ನಿಜವಾದ ಭರವಸೆಗಳನ್ನು ನೀಡಲು ಸಾಧ್ಯವಿಲ್ಲ' ಎಂಬ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಗುರುವಾರ ತಿರುಗೇಟು ನೀಡಿದೆ.

ಭ್ರಷ್ಟಾಚಾರ ವಿಚಾರದಲ್ಲಿ ಜನರ ದಾರಿ ತಪ್ಪಿಸಲು ಬಿಜೆಪಿ ಯತ್ನ: ಸಿದ್ದರಾಮಯ್ಯ
ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹಿಂದೆ ವಿರೋಧ ಪಕ್ಷದವರಿದ್ದಾರೆ ಎಂದು ಹೇಳಿ ಜನರನ್ನು ಬಿಜೆಪಿಯವರು ದಾರಿ ತಪ್ಪಿಸಲು ನೋಡುತ್ತಿದ್ದಾರೆ...

