ರಾಜ್ಯಖಾಸಗಿ ಸಾರಿಗೆ ಬಂದ್: ಬಿಎಂಟಿಸಿಯಿಂದ 4000 ಹೆಚ್ಚುವರಿ ಟ್ರಿಪ್; ಹಲವೆಡೆ ಆಟೋ ಚಾಲಕರ ಪ್ರತಿಭಟನೆ, ನಗರಾದ್ಯಂತ ಬಿಗಿ ಬಂದೋಬಸ್ತ್
‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ್ಯಾಪಿಡೊ ಬೈಕ್ ಟ್ಯಾಕ್ಸಿ ನಿಷೇಧಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಇಂದು ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ನಡೆಸಲಿದೆ.