ರಾಜ್ಯಸರ್ಕಾರಿ ಕಚೇರಿಗಳಿಗಾಗಿ 50 ಮಹಡಿಗಳ ಅವಳಿಗೋಪುರ ನಿರ್ಮಾಣ: ಗೋವಿಂದ ಕಾರಜೋಳ
ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಸದುದ್ದೇಶದಿಂದ ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಆನಂದರಾವ್ ಸರ್ಕಲ್ ಬಳಿ 50 ಮಹಡಿಗಳ ಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.