ರಾಜ್ಯಬಡ್ತಿ ಹೊಂದಿದ ಸಹ ಶಿಕ್ಷಕರು,ಪದವಿ ಪೂರ್ವ ಉಪನ್ಯಾಸಕರಿಗೆ 6ನೇ ವೇತನ ಶಿಫಾರಸು ಅನುಷ್ಠಾನಗೊಳಿಸಲು ಎಚ್ ಡಿಡಿ ಒತ್ತಾಯ
ಬಡ್ತಿ ಹೊಂದಿದ ಸಹ ಶಿಕ್ಷಕರು ಮತ್ತು ಪದವಿಪೂರ್ವ ಉಪನ್ಯಾಸಕರಿಗೆ ಉಂಟಾಗಿರುವ ಆರ್ಥಿಕ ನಷ್ಟವನ್ನು ಪರಿಹರಿಸುವ ಸಂಬಂಧ 6ನೇ ವೇತನ ಆಯೋಗದ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.